ಬಂಟ್ವಾಳ : SSLC ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ
ಭವಿಷ್ಯ ಆಚಾರ್ಯ (15) ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಆತ್ಮಹತ್ಯೆಗೆ ಶರಣಾಗಿರುವ ಬಾಲಕ.
ಈತ ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದು ,ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.
ಸ್ನಾನ ಮಾಡಲೆಂದು ಕೋಣೆಗೆ ತೆರಳಿದ ಮಗ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಬಾಲಕನನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ತಪಾಸಣೆಗೊಳಪಡಿಸಿದಾಗ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ