ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ಅಧಿಕೃತ ಆದೇಶ: 500 ಕೋಟಿ ಅನುದಾನ

Team Newsnap
1 Min Read

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದೀಗ ನಿಗಮಕ್ಕೆ ಆರಂಭಿಕ ಅನುದಾನವಾಗಿ 500 ಕೋಟಿ ರೂ.ಗಳ ಬಿಡುಗಡೆಗೆ ಅನುಮತಿ ನೀಡಿದ್ದಾರೆ.

ಈ ಕುರಿತು ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 500 ಕೋಟಿ ರೂ. ಆರಂಭಿಕ ಅನುದಾನ ನೀಡಿದೆ. ತಾತ್ಕಾಲಿಕವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ನಿಗಮದ ಹೊಣೆ ನೀಡಲಾಗಿದೆ.

ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆದೇಶ ಹೊರಡಿಸಿದ್ದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಾರದ ಹಿಂದೆ ಆದೇಶ ನೀಡಿದ್ದರು.

ರಾಜ್ಯದಲ್ಲೀಗ ಪ್ರಾಧಿಕಾರ ಮತ್ತು ಮೀಸಲು ಪಾಲಿಟಿಕ್ಸ್ ಜೋರಾಗ್ತಿದೆ. ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಲೇ, ವೀರಶೈವ ಲಿಂಗಾಯತರು ಧ್ವನಿ ಮುನ್ನಲೆಗೆ ಬಂದಿದೆ. ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಸೋಮಣ್ಣ, ಬಿಸಿ ಪಾಟೀಲ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ಅವರಿದ್ದ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿತ್ತು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ನಂತರ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ರಾಜ್ಯಾಧಕ್ಷರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ನಮ್ಮ ಸಮಾಜದ ಕಡು ಬಡವರು, ಸಮಾಜದ ಹಿಂದುಳಿದ ವರ್ಗಕ್ಕೆ ಮತ್ತು ಯುವಕರಿಗೆ ಸಹಾಯ ಆಗಬೇಕು. ಹೀಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಆಗ್ರಹಿಸಿದ್ದರು.

Share This Article
Leave a comment