November 24, 2024

Newsnap Kannada

The World at your finger tips!

independence day

ಮೈಸೂರು ಉಸ್ತುವಾರಿ ಸಚಿವರಿಂದ 78 ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ

Spread the love

ಮೈಸೂರು :ಅದ್ದೂರಿಯಾಗಿ 78 ನೇ ಸ್ವಾತಂತ್ರೋತ್ಸವ ದಿನಾಚರಣೆಯನ್ನು ನಗರದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಆಚರಣೆ ಮಾಡಲಾಯಿತು.


ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜವಂದನೆ ಸ್ವೀಕರಿಸಿದರು.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು.

image 14

ಪೆರೇಡ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪೆರೇಡ್ ನಲ್ಲಿ ಪೊಲೀಸ್ ಇಲಾಖೆಯ ಪುರುಷ ಹಾಗೂ ಮಹಿಳಾ ತಂಡಗಳು, ಗೃಹ ರಕ್ಷಕ ದಳ, ಅಗ್ನಿ ಶಾಮಕ ದಳ, ಅಬಕಾರಿ ದಳ, ಎನ್ ಎಸ್ ಎಸ್, ಎನ್ ಸಿ ಸಿ ತಂಡಗಳು, ವಿಶೇಷ ಚೇತನ ಮಕ್ಕಳ ತಂಡ ಹಾಗೂ ಶಾಲಾ ಕಾಲೇಜು ತಂಡಗಳು ಭಾಗವಹಿಸಿದ್ದವು.

ಸಚಿವರು 78 ಸ್ವಾತಂತ್ರೋತ್ಸವ ದಿನಾಚರಣೆಯ ಶುಭ ಸಂದೇಶವನ್ನು ನೀಡಿದರು.

image 15

ಗುಡ್ ಶಫರ್ಡ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ವಿವಿಧತೆಯಲ್ಲಿ ಏಕತೆ ದೇಶಭಕ್ತಿ ಗೀತೆ, ನಿರ್ಮಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ಮಕ್ಕಳಿಂದ ದೇಶ ಭಕ್ತಿ ಗೀತೆಗೆ ಸಮೂಹ ನೃತ್ಯ ಹಾಗೂ ಸಂತ ಫಿಲೋಮಿನಾ ಪ್ರೌಢ ಶಾಲಾ ಮಕ್ಕಳಿಂದ ದೇಶ ಪ್ರೇಮಿ ಭಗತ್ ಸಿಂಗ್ ಅವರ ಮರಣ ದಂಡನೆಯ ನೃತ್ಯ ರೂಪಕವನ್ನು ಪ್ರದರ್ಶನವನ್ನು ಪ್ರಸ್ತುತಪಡಿಸಿದರು. ದೇಶದ ಸ್ವಾತಂತ್ರ್ಯಕ್ಕೆ ನೆರಳಾದ ನೀರಾಳ ಬದುಕು ಅವಮಾನದ ಕುಲುಮೆಯಲ್ಲಿ ಕಮರಿ ಹೋಯಿತು.

image 17

ಸಮಾರಂಭದಲ್ಲಿ ಶಾಸಕರಾದ ತನ್ವೀರ್ ಸೇಠ್, ಮೂಡಾ ಅಧ್ಯಕ್ಷರಾದ ಕೆ ಮರಿಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ದಕ್ಷಿಣ ವಲಯ ಐ ಜಿ ಪಿ ಬೋರಲಿಂಗಯ್ಯ, ನಗರ ಪೊಲೀಸ್ ಆಯುಕ್ತ ರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜ್ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

Copyright © All rights reserved Newsnap | Newsever by AF themes.
error: Content is protected !!