ಮುಡಾ ಹಗರಣ – ಚಾಮುಂಡಿ ಬೆಟ್ಟದ ಅಂಗಡಿ ಬಂದ್ ಮಾಡಿಸಿದ ಪ್ರತಿಭಟನಾಕಾರರು

Team Newsnap
1 Min Read

ಮೈಸೂರು : ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರು ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯಲ್ಲಿ ಚಾಮುಂಡಿ ಬೆಟ್ಟದ ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಬಂದ ಭಕ್ತರಿಗೂ ಪ್ರತಿಭಟನೆಯ ಬಿಸಿ ತಟ್ಟಿದೆ.

ಪ್ರತಿಭಟನೆಯಲ್ಲಿ ಚಾಮುಂಡಿ ಬೆಟ್ಟದ ವ್ಯಾಪಾರಿಗಳು ಮತ್ತು ನಿವಾಸಿಗಳೂ ಭಾಗಿಯಾಗಿದ್ದಾರೆ.

ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಸಜ್ಜಾಗಿದ್ದು, ರಾಜ್ಯಪಾಲರ ವಿರುದ್ಧ ದೂರು ಸಲ್ಲಿಸಲಿದ್ದಾರೆ.ವಿಶ್ವ ಸಂಸ್ಕೃತ ದಿನ World Sanskrit Day

ರಾಜ್ಯಪಾಲರು ,ಸಿಎಂ ಸಿದ್ದರಾಮಯ್ಯ ವಿರುದ್ಧಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.

Share This Article
Leave a comment