ನವದೆಹಲಿ: ದೇಶಾದ್ಯಂತ 234 ನಗರಗಳಲ್ಲಿ 730 ಹೊಸ ಎಫ್‌ಎಂ (FM) ಚಾನೆಲ್ ತೆರೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಸಾರ ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ಖಾಸಗಿ ಸಂಸ್ಥೆಗಳಿಗೆ ಇ-ಹರಾಜು ಮೂಲಕ ಎಫ್‌ಎಂ ಚಾನೆಲ್ ಅವಕಾಶ ಸಿಗಲಿದ್ದು, 730 ಚಾನೆಲ್‌ಗಳಿಗೆ 784.87 ಕೋಟಿ ರೂ ಮೂಲ ಬಿಡ್ಡಿಂಗ್ ಮೊತ್ತ ನಿಗದಿ ಮಾಡಲಾಗಿದೆ.
ದಾವಣಗೆರೆ, ಗದಗ ಬೆಟಗೇರಿ, ಹಾಸನ, ಹೊಸಪೇಟೆ, ಉಡುಪಿ ,ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಚಿತ್ರದುರ್ಗ ಸೇರಿದಂತೆ 16 ನಗರಗಳಲ್ಲಿ 53 ಎಫ್‌ಎಂ ಕೇಂದ್ರ ತೆರೆಯಲು ಅನುಮತಿ ದೊರಕಿದೆ.ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ
ಇದರಿಂದ ಹೊಸ ಉದ್ಯೋಗಾವಕಾಶಗಳ ಸೃಷ್ಟಿಗೆ ಕಾರಣವಾಗುತ್ತದೆ ಅಲ್ಲದೆ ಸ್ಥಳೀಯ ಉಪಭಾಷೆ ಮತ್ತು ಸಂಸ್ಕೃತಿಗೆ ಉತ್ತೇಜನ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ.
More Stories
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ