ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

Team Newsnap
1 Min Read

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು ಕಳೆಯುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.

ಫ್ಲೋರಿಡಾದ ಗಾಲ್ಫ್​ ಕೋರ್ಸ್​ ಬಳಿ ದಾಳಿ ನಡೆದಿದ್ದು , ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಸುರಕ್ಷಿತವಾಗಿದ್ದಾರೆ, ಆದರೆ ಟ್ರಂಪ್​ ಅವರನ್ನೇ ಗುರಿಯಾಗಿಸಿ ಗುಂಡಿನ ದಾಳಿ ನಡೆದಿದೆಯೇ ಇಲ್ಲವೇ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇದೇ ವರ್ಷ ಜುಲೈ 13ರಂದು ಅವರ ಮೇಲೆ ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿರುವ ಬಟ್ಲರ್ ಎಂಬಲ್ಲಿ ಗುಂಡಿನ ದಾಳಿ ನಡೆದಿತ್ತು . ಅಂದು ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಟ್ರಂಪ್ ಅವರ ಮೇಲೆ ಸುಮಾರು 442 ಅಡಿಗಷ್ಟು ದೂರದಿಂದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದನು.

ಅಂದು ಹಾರಿದ ಗುಂಡು ಅವರ ಬಲಕಿವಿಯ ತುದಿಗೆ ತಾಕಿ ರಕ್ತ ಸೋರಿಕೆಯಾಗಿತ್ತು, ಕೂದಲೆಳೆ ಅಂತರದಲ್ಲಿ ಟ್ರಂಪ್‌ ಪಾರಾಗಿದ್ದರು. ಇದಾದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿರುವುದು ಟ್ರಂಪ್‌ ಬೆಂಬಲಿಗರ ಆತಂಕಕ್ಕೆ ಕಾರಣವಾಗಿದೆ.

ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಟ್ರಂಪ್ ಗಾಲ್ಫ್ ಕೋರ್ಸ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಪುತ್ರ ಟ್ರಂಪ್ ಜೂನಿಯರ್ ಟ್ವೀಟ್ ಮಾಡಿದ್ದಾರೆ.ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ಅಲ್ಲಿ ಎಕೆ-47 ಅನ್ನು ವಶಪಡಿಸಿಕೊಳ್ಳಲಾಗಿದೆ, ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

Share This Article
Leave a comment