ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ

Team Newsnap
1 Min Read

ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಒಂದೂವರೆ ವರ್ಷದ ಹಿಂದಿ‌ನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿದ್ದು ,ಪಾಲಕರು ವಿರೋಧಿಸಿದ ಕಾರಣ ಅಕ್ಟೋಬರ್ 1 ರಿಂದ ಗಟ್ಟಿ ಬೆಲ್ಲ ನೀಡುವುದಾಗಿ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿರುವ 139 ಎಂಎಸ್‌ಪಿಟಿಸಿಗಳನ್ನು ಉನ್ನತೀಕರಿಸಲು ಹೊರಟ್ಟಿದ್ದೇವೆ ಹಾಗೂ ಉತ್ತಮ ಲ್ಯಾಬ್ ಸೌಲಭ್ಯಗಳನ್ನು ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ನಿಲ್ಲಿಸಲಾಗುವುದಿಲ್ಲ.

ಈಗಾಗಲೆ ನಾನು ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದು , ಮತ್ತೊಮ್ಮೆ ಸ್ಪಷ್ಟನೆ ಕೊಡುತ್ತಿದ್ದೇನೆ.ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿದ್ದು ,ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

Share This Article
Leave a comment