ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದು ,ಪೊಲೀಸರು ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ.
ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ.
ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ.ಇದನ್ನು ಓದಿ –ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಸಿಎಂ ಎತ್ತಿದ್ದ ಎಲ್ಲ ಕಾನೂನು ಪ್ರಶ್ನೆಗಳನ್ನು ಹೈಕೋರ್ಟ್ ತಿರಸ್ಕರಿಸಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ