ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.
ಆದರ್ಶ್ ಐಯ್ಯರ್ ಎನ್ನುವರು ನಿರ್ಮಲಾ ಸೀತಾರಾಮನ್ ಸೇರಿ ಹಲವರು ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿದ್ದು ,ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಒಟ್ಟಾರೆ ಐವರ ಮೇಲೆ ಎಫ್‌ಐಆರ್ ದಾಖಲಾಗಿದೆ . ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದು ,ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ವೇಳಾಪಟ್ಟಿ ಬಿಡುಗಡೆ
ಐಪಿಸಿ ಸೆಕ್ಷನ್ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್ ದಾಖಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ