ಮುಡಾ ಹಗರಣ : ಇಂದಿನಿಂದ ಸಿಎಂ ವಿರುದ್ಧ ತನಿಖೆ ಆರಂಭ

Team Newsnap
1 Min Read

ಮೈಸೂರು : ಇಂದಿನಿಂದ ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭಿಸಲಿದ್ದಾರೆ.

ಪೊಲೀಸರು ದೂರುದಾರರಿಗೆ ನೋಟಿಸ್‌ ನೀಡಿ ವಿಚಾರಣೆ ನಡೆಸಲಿದ್ದು ,ದೂರುದಾರರ ಬಳಿ ದಾಖಲೆಯನ್ನು ಸಂಗ್ರಹಿಸಲಿದ್ದಾರೆ.

ಮತ್ತೊಂದೆಡೆ ನಿವೃತ್ತ ನ್ಯಾ. ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಆರಂಭವಾಗಲಿದ್ದು , ಆ ದಾಖಲೆಗಳು ಸಿಕ್ಕ ಮೇಲೆ ಆರೋಪಿಗಳಿಗೆ ಹಂತ ಹಂತವಾಗಿ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ.ಇದನ್ನು ಓದಿ –ಹಣದ ಮೌಲ್ಯ

ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಹಗರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದ್ದಾರೆ.

Share This Article
Leave a comment