ಬಸ್ ನಿಲ್ದಾಣಗಳು, ಸಾರ್ವಜನಿಕ ಶೌಚಾಲಯಗಳು, ನೀರಿನ ಘಟಕಗಳ ಮೇಲೆ ರಾರಾಜಿಸುತ್ತಿದ್ದ ರಾಜಕೀಯ ನಾಯಕರ ಭಾವಚಿತ್ರಗಳಿಗೆ ಬ್ರೇಕ್ ಸಿಗಲಿದೆ. ಇಂತಹ ಫೋಟೊ ಹಾಕುವುದು ಅಥವಾ ಸಾರ್ವಜನಿಕ ಸ್ಥಳಗಳ ವಿರೂಪಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಸುತ್ತೋಲೆ ಹೊರಡಿಸಿದ್ದಾರೆ.
ಎಂಟು ವಲಯಗಳ ಜಂಟಿ ಆಯುಕ್ತರುಗಳು ಮತ್ತು ಮುಖ್ಯ ಎಂಜಿನಿಯರ್‌ಗಳಿಗೆ ಈ ರೀತಿಯ ಫೋಟೊ ಹಾಕುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆಯುಕ್ತರು ಸೂಚನೆ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತ ಅವರ ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡಿರುವ ಆಯುಕ್ತ ಮಂಜುನಾಥ್ ಪ್ರಸಾದ್, ಈಗಾಗಲೇ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ಧಾಣ, ಶೌಚಾಲಯ ಹಾಗೂ ನೀರಿನ ಘಟಕಗಳ ಮೇಲೆ ಹಾಕಿರುವ ಚುನಾಯಿತ ಪ್ರತಿನಿಧಿಗಳ ಫೋಟೋಗಳನ್ನು ತೆಗೆದುಹಾಕುವಂತೆ ಇದೆ ವೇಳೆ ಜಂಟಿ ಆಯುಕ್ತರು ಮತ್ತು ಮುಖ್ಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ.
ಪಾಲಿಕೆ ಒದಗಿಸಿದ ಅಭಿವೃದ್ಧಿ ಯೋಜನೆಗಳು ಮತ್ತು ಸೌಕರ್ಯಗಳಿಗೆ ಸಂಬಂಧಿಸಿದ ಜಾಹೀರಾತುಗಳಲ್ಲಿ ಚುನಾಯಿತ ಪ್ರತಿನಿಧಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲು ಯಾವುದೇ ಅವಕಾಶವಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಎಲ್ಲದರೂ ಈ ರೀತಿಯ ಉಲ್ಲಂಘನೆ ನಡೆದರೆ, ಪೊಲೀಸ್ ಠಾಣೆಯಲ್ಲಿ 1981 ರ ಕರ್ನಾಟಕ ಸಾರ್ವಜನಿಕ ಸ್ಥಳಗಳ (ವಿರೂಪಗೊಳಿಸುವಿಕೆ ತಡೆಗಟ್ಟುವಿಕೆ) ಕಾಯ್ದೆಯಡಿ ಕ್ರಿಮಿನಲ್ ದೂರು ದಾಖಲಿಸುವಂತೆ ಅವರು ಜಂಟಿ ಆಯುಕ್ತರುಗಳು ಹಾಗೂ ಇಂಜಿನಿಯರ್‌ಗಳಿಗೆಗಳಿಗೆ ನಿರ್ದೇಶನ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ