ಮೈಸೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 5800 ಶಿಕ್ಷಕರನ್ನು ಶೀಘ್ರದಲ್ಲೇ ನೇಮಕ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.
ಮೈಸೂರಿನ ಕಲಾಮಂದಿರದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ಆಯೋಜಿಸಿದ್ದ ಮಕ್ಕಳ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
“ಎರಡನೇ ಬಾರಿಗೆ ಮಕ್ಕಳ ದಸರಾ ಉದ್ಘಾಟಿಸುತ್ತಿದ್ದೇನೆ. ಕಳೆದ ಬಾರಿ ಈ ಇಲಾಖೆ ನನ್ನ ಹೊಸದಾಗಿತ್ತು, ಆದರೆ ಈಗ ಸಾಕಷ್ಟು ಸುಧಾರಣೆಗಳನ್ನು ಮಾಡಿದ್ದೇನೆ. 12,000 ಶಿಕ್ಷಕರ ನೇಮಕಾತಿ ಈಗಾಗಲೇ ಯಶಸ್ವಿಯಾಗಿ ಮುಗಿದಿದೆ. ಇದೀಗ ಕಲ್ಯಾಣ ಕರ್ನಾಟಕ ಭಾಗದಲ್ಲಿ 5800 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ,” ಎಂದು ಅವರು ಮಾಹಿತಿ ನೀಡಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂತಸ ವ್ಯಕ್ತಪಡಿಸಿದ ಅವರು, “ಸರ್ಕಾರಿ ಶಾಲೆಗಳಲ್ಲಿನ ಹಲವು ಕೊರತೆಗಳಿದ್ದರೂ, ಅಲ್ಲಿನ ಶಿಕ್ಷಕರು ಅತ್ಯುತ್ತಮವಾಗಿದ್ದಾರೆ. ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರದಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ,” ಎಂದು ಅವರು ಸರ್ವಜನೆಗೆ ತಿಳಿಸಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು