December 19, 2024

Newsnap Kannada

The World at your finger tips!

KSRTC , UPI , Ticket

ದಸರಾ 2024 : KSRTC ಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ವ್ಯವಸ್ಥೆ

Spread the love

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ KSRTC 2000ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.

ಈ ವಿಶೇಷ ಬಸ್‌ಗಳು ಅಕ್ಟೋಬರ್ 9ರಿಂದ 12ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹಾಗೂ ಅಕ್ಟೋಬರ್ 13 ಮತ್ತು 14ರಂದು ಬಸ್‌ಗಳು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಸಂಚರಿಸಲಿವೆ.

ಕರ್ನಾಟಕ ಸಾರಿಗೆ ಸಂಸ್ಥೆ (KSRTC) ವೇಗದೂತ, ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್), ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಮತ್ತು ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಕೊಲ್ಲೂರು, ಗೋಕರ್ಣ, ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಲಂ, ಪಾಲ್‌ಘಾಟ್ ಮತ್ತು ಇತರ ಸ್ಥಳಗಳಿಗೆ ಈ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.ಕೋಲಾರ: ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ – ತಾಯಿ , ಮಗ ಸಾವು

660 ವಿಶೇಷ ಬಸ್‌ಗಳು: ಮೈಸೂರು ರಸ್ತೆಯ ಬಸ್ ನಿಲ್ದಾಣದಿಂದ ಮೈಸೂರಿಗೆ 260 ಹೆಚ್ಚುವರಿ ಬಸ್‌ಗಳ ಮತ್ತು ಮೈಸೂರಿನ ಸುತ್ತಮುತ್ತಲಿನ ಚಾಮುಂಡಿ ಬೆಟ್ಟ, ಕೆ.ಆರ್.ಎಸ್. ಅಣೆಕಟ್ಟು, ಶ್ರೀರಂಗಪಟ್ಟಣ, ನಂಜನಗೂಡು, ಮಡಿಕೇರಿ, ಮಂಡ್ಯ, ಮಳವಳ್ಳಿ, ಚಾಮರಾಜನಗರ, ಮತ್ತು ಗುಂಡ್ಲುಪೇಟೆ ಸೇರಿದಂತೆ ಹಲವಾರು ಸ್ಥಳಗಳಿಗೆ 400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. www.ksrtc.karnataka.gov.in ವೆಬ್‌ಸೈಟ್ ಅಥವಾ ಮೊಬೈಲ್ ಮೂಲಕ ಇ-ಟಿಕೆಟ್‌ಗಳನ್ನು ಕಾಯ್ದಿರಿಸಬಹುದು.

Copyright © All rights reserved Newsnap | Newsever by AF themes.
error: Content is protected !!