October 16, 2024

Newsnap Kannada

The World at your finger tips!

mandya , job , application

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮಂಡ್ಯದಲ್ಲಿ ಅ.18, 19 ರಂದು ಉದ್ಯೋಗ ಮೇಳ

Spread the love

ಮಂಡ್ಯ: ಅ.18 ಮತ್ತು 19 ರಂದು ಮಂಡ್ಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತರು ಈ ಮೇಳದಲ್ಲಿ ಭಾಗವಹಿಸಬಹುದು.

ಈ ಮೇಳದಲ್ಲಿ 150 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, 3000ಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಿವೆ.

“ಮಂಡ್ಯ ಟು ಇಂಡಿಯಾ” ಎಂಬ ಹೆಸರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅ.18 ಮತ್ತು 19ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಉದ್ಯೋಗ ಮೇಳ ನಡೆಯಲಿದೆ. ಇದನ್ನು ಓದಿ –ಸಾಲಗಾರರಿಗೆ ಸಿಹಿ ಸುದ್ದಿ: ಆರ್ ಬಿ ಐ ರೆಪೊ ದರ ಯಥಾಸ್ಥಿತಿ

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.

Copyright © All rights reserved Newsnap | Newsever by AF themes.
error: Content is protected !!