ಮುಂಬೈ: ಪ್ರಸಿದ್ಧ ಉದ್ಯಮಿ ಹಾಗೂ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ .
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ರತನ್ ಟಾಟಾ ಅವರನ್ನು ಕಳೆದ ಸೋಮವಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಹಿರಿಯ ವೈದ್ಯರು ಅವರ ಚಿಕಿತ್ಸೆ ನೋಡಿಕೊಂಡಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ವಿಷಯದ ಕುರಿತು ಸೋಮವಾರ ಸ್ವತಃ ರತನ್ ಟಾಟಾ ಅವರೇ ಮಾಹಿತಿ ಹಂಚಿಕೊಂಡಿದ್ದು, “ನಾನು ಎಂದಿನಂತೆ ಆರೋಗ್ಯ ತಪಾಸಣೆಗೆ ಬಂದಿದ್ದೇನೆ, ಸಾರ್ವಜನಿಕರು ತಪ್ಪು ವಿವರಗಳನ್ನು ತಿಳಿದುಕೊಳ್ಳಬೇಡಿ.ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಹಿ ಸುದ್ದಿ: 50 ‘ಅಕ್ಕ ಕೆಫೆ-ಬೇಕರಿ’ ತೆರೆಯಲು ಯೋಜನೆ ಆರಂಭ
ಆತಂಕ ಪಡುವಂತಹ ವಿಷಯ ಏನೂ ಇಲ್ಲ” ಎಂದು ವಿನಂತಿಸಿದ್ದರು. ಆದರೆ ಈಗಾಗಲೇ ಬರುವ ವರದಿ ಪ್ರಕಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ