ಬೆಂಗಳೂರು:ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯ ತೀರ್ಮಾನ ಅಕ್ಟೋಬರ್ 14 ರಂದು ಪ್ರಕಟವಾಗಲಿದೆ.
ಸೆಷನ್ಸ್ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಜೈಶಂಕರ್ ಅವರು ಇಂದು ಸುದೀರ್ಘ ವಿಚಾರಣೆ ನಡೆಸಿ, ವಿಚಾರಣೆಯನ್ನು ಮುಕ್ತಾಯಗೊಳಿಸಿ ಅ.14 ರಂದು ಜಾಮೀನು ಅರ್ಜಿಯ ಮೇಲೆ ತೀರ್ಪು ಪ್ರಕಟಿಸುವುದಾಗಿ ಘೋಷಿಸಿದರು.
ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ, ಪೊಲೀಸರ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ (SPP) ಪ್ರಸನ್ನ ಕುಮಾರ್ ವಾದಿಸಿದರು. ಬುಧವಾರ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಮುಗಿದ ಬಳಿಕ, ಕೋರ್ಟ್ ಅ.14 ರಂದು ಇಬ್ಬರ ಜಾಮೀನು ಕುರಿತಾದ ತೀರ್ಪನ್ನು ಪ್ರಕಟಿಸಲು ತೀರ್ಮಾನಿಸಿತ್ತು.ಅಡಿಕೆ ವ್ಯಾಪಾರಿಗನ್ನು ಬೆದರಿಸಿ 17 ಲಕ್ಷ ದರೋಡೆ: 7 ಆರೋಪಿಗಳ ಬಂಧನ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರೆ, ಪವಿತ್ರಾ ಗೌಡ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ