December 19, 2024

Newsnap Kannada

The World at your finger tips!

politics , Election , contestant

ಚನ್ನಪಟ್ಟಣ ಕ್ಷೇತ್ರದಿಂದ ನಿಖಿಲ್ ಕಣಕ್ಕೆ? ಹೆಚ್‌ ಡಿ ಪುತ್ರನಿಗೆ ಹೊಸ ರಾಜಕೀಯ ಪಥ

Spread the love

ರಾಮನಗರ :ಈ ಬಾರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೈವೋಲ್ಟೇಜ್ ಆಗಿದ್ದು, ಮೈತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಕುತೂಹಲಕ್ಕೆ ಕಾರಣವಾಗಿದೆ.

ಮೊದಲು ಸಿ.ಪಿ. ಯೋಗೇಶ್ವರ್ ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಹೊರತರುತ್ತಿದ್ದಾರೆ ಎನ್ನಲಾಗಿದ್ದರೂ, ಹಳೆ ಬಿಜೆಪಿ ನಾಯಕನಿಗೆ ಟಿಕೆಟ್ ಸಿಗುವದು ಅನುಮಾನಾಸ್ಪದವಾಗಿದೆ.

ಇದಕ್ಕೆ ಕಾರಣವೆಂದರೆ, ಹೆಚ್‌ ಡಿ ಕುಮಾರಸ್ವಾಮಿ ಅವರ ಸಕ್ರೀಯ ಪ್ರವೇಶ. ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ನಡೆಯುತ್ತಿರುವ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದು, ಕ್ಷೇತ್ರದ ಪ್ರಮುಖ ಮುಖಂಡರೊಂದಿಗೆ ನಿರಂತರವಾಗಿ ಚರ್ಚೆ ನಡೆಸುತ್ತಿದ್ದಾರೆ. ನಿಖಿಲ್ ಅವರ ಈ ತಕ್ಷಣದ ಸಕ್ರಿಯತೆಯು, ಅವರ ಉಪಚುನಾವಣೆ ಸ್ಪರ್ಧೆಯನ್ನು ಗಂಭೀರ ವಿಷಯವನ್ನಾಗಿ ಮಾಡಿದೆ.

ಇದರಲ್ಲಿ ಮತ್ತೊಂದು ಮುಖ್ಯ ವಿಚಾರವೆಂದರೆ, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ನಡುವಿನ ಮಾತುಕತೆ. ಹೆಚ್‌ ಡಿ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ಅವರಿಗೆ ಟಿಕೆಟ್ ಬಿಟ್ಟುಕೊಡುವಂತೆ ಮನವೊಲಿಸಲು ಈ ಮಾತುಕತೆಯಲ್ಲಿ ಸಲಹೆ ನೀಡಿದ್ದಾರೆ.ಮೊಹಮ್ಮದ್ ಸಿರಾಜ್ ಡಿಎಸ್‌ಪಿಯಾಗಿ ಅಧಿಕಾರ ಸ್ವೀಕಾರ

ಈ ಬೆಳವಣಿಗೆಗಳ ಬೆನ್ನಲ್ಲೇ, ನಿಖಿಲ್ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಜೋರಾಗಿದೆ.

Copyright © All rights reserved Newsnap | Newsever by AF themes.
error: Content is protected !!