December 20, 2024

Newsnap Kannada

The World at your finger tips!

election , date , announcement

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ : ನ13 ರಂದು ಮತದಾನಕ್ಕೆ ಮುಹೂರ್ತ

Spread the love
  • ಕರ್ನಾಟಕದಲ್ಲಿ ಮತ್ತೊಂದು ಮಿನಿ ಮಾಹಾ ಚುನಾವಣೆ
  • 3 ಕ್ಷೇತ್ರದಲ್ಲಿ ಅ. 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ
  • ಹೆಚ್​.ಡಿ ಕುಮಾರಸ್ವಾಮಿ, ಬೊಮ್ಮಾಯಿ, ಈ. ತುಕಾರಾಮ್ ರಾಜೀನಾಮೆ

ನವದೆಹಲಿ : ಲೋಕಸಭಾ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮತ್ತೊಂದು ಮಿನಿ ಮಾಹಾ ಚುನಾವಣೆ ಸಜ್ಜಾಗಿದೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ನವೆಂಬರ್ 13ಕ್ಕೆ ಕರ್ನಾಟದ 3 ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಅಕ್ಟೋಬರ್ 25ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 13 ರಂದು ಮೂರು ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದನ್ನು ಓದಿ – ಮಂಡ್ಯದಲ್ಲಿ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ವಂಚನೆ

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಿಗಧಿಯಾಗಿದೆ. ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗುತ್ತಿದೆ.

kumarswamy

ಚನ್ನಪಟ್ಟಣ

Copyright © All rights reserved Newsnap | Newsever by AF themes.
error: Content is protected !!