ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಇಂದು ಬಿಡುಗಡೆ ಹೊಂದಿದ್ದಾರೆ.
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಸಂಬಂಧ ಜೈಲು ಸೇರಿದ್ದ ಬಿ.ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರುಗೊಂಡಿದ್ದು, ಆಧಾರದ ಮೇಲೆ ಅವರು ಇಂದು ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ಜೈಲಿನಿಂದ ಬಿಡುಗಡೆ ನಂತರ ಮಾತನಾಡಿದ ಬಿ.ನಾಗೇಂದ್ರ, “ಇಡಿ ಅಧಿಕಾರಿಗಳು 3 ತಿಂಗಳು ನನ್ನನ್ನು ಬಂಧಿಸಿ ಕಿರುಕುಳ ನೀಡಿದರು. ನಾನು ಯಾವುದೇ ತಪ್ಪು ಮಾಡಿಲ್ಲ,” ಎಂದು ಹೇಳಿದ್ದಾರೆ.ಇದನ್ನು ಓದಿ –ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ
ವಾಲ್ಮೀಕಿ ನಿಗಮದ ಹಗರಣದ ಸಂಬಂಧ ಇಡಿ ಅಧಿಕಾರಿಗಳು ಜುಲೈ 12 ರಂದು ಬಿ.ನಾಗೇಂದ್ರ ಅವರನ್ನು 7 ಗಂಟೆಗಳ ಕಾಲ ಸತತವಾಗಿ ವಿಚಾರಣೆ ನಡೆಸಿ ಬಳಿಕ ಬಂಧಿಸಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ, ಮತ್ತು ತನಿಖಾ ಸಂಸ್ಥೆ ಕರೆದಾಗ ವಿಚಾರಣೆಗೆ ಹಾಜರಾಗುವ ಷರತ್ತಿನ ಆಧಾರದ ಮೇಲೆ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
More Stories
ಸಿ.ಟಿ. ರವಿ ಮೇಲೆ ಹಲ್ಲೆ: ಕೊಲೆಗೆ ಸಂಚು ರೂಪಿಸಿದ್ದಾರೆಂದು ಆರೋಪ
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ