ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ.ಮರೀಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ನಿವೇಶನ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿಯ ವಿರುದ್ಧ 14 ಸೈಟ್ ಹಂಚಿಕೆಯ ಹಗರಣದ ಆರೋಪಗಳು ಕೇಳಿಬರುತ್ತಿರುವ ನಡುವೆಯೇ ಕೆ.ಮರೀಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಹಿನ್ನಲೆಯಲ್ಲಿ ಮರೀಗೌಡ ರಾಜೀನಾಮೆ ಸಲ್ಲಿಸಿದ್ದಾರಂತೆ. ಮುನ್ನವೇ ಮರೀಗೌಡರನ್ನು ಮುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದರೂ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತರಾಗಿದ್ದ ಮರೀಗೌಡರನ್ನೇ ಈ ಹುದ್ದೆಗೆ ನೇಮಕ ಮಾಡಿದ್ದರು.ಇದನ್ನು ಓದಿ –3 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ
ಆದರೆ, ಈಗ ಸಿಎಂ ಅವರೇ ಮರೀಗೌಡಗೆ ರಾಜೀನಾಮೆ ನೀಡುವಂತೆ ಸೂಚಿಸಿರುವ ಹಿನ್ನೆಲೆ, ಅವರು ಇಂದು ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
More Stories
ಮಳೆ ನಿಂತರೂ ಮರದ ಹನಿ ನಿಲ್ಲದು
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ