ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಸೈಟ್‌ಗಳನ್ನು ವಾಪಸ್ ಕೊಟ್ಟಿದ್ದರಿಂದ ಮಾತ್ರ ಪ್ರಕರಣ ಕೊನೆಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.
ಮುಡಾದಿಂದ 50:50 ಅನುಪಾತದಲ್ಲಿ ಹಂಚಿಕೆಗೊಂಡ ಎಲ್ಲಾ ಸೈಟ್‌ಗಳನ್ನು ವಾಪಸ್ ಪಡೆಯಬೇಕು ಎಂದು ಪಟ್ಟುಹಿಡಿದಿದ್ದಾರೆ.
ಇದರ ಜೊತೆಗೆ, ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕೂಡ ಬೇನಾಮಿ ಹೆಸರಿನಲ್ಲಿ ಸೈಟ್‌ಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನು ಓದಿ –ರಾಜ್ಯದ 7 ಜಿಲ್ಲೆಗಳಿಗೆ ಅ.21 ರ ವರೆಗೆ ‘ಯಲ್ಲೋ’ ಅಲರ್ಟ್ ಘೋಷಣೆ
ಈ ಹಗರಣದ ವಿಚಾರ ಮುಂದಿಟ್ಟುಕೊಂಡು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಪ್ರಕರಣ ಈಗ ಕೋರ್ಟ್ ಮೆಟ್ಟಿಲೇರಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು