ಮೈಸೂರು: ರಾಜ್ಯದಲ್ಲಿ ನಡೆಯುವ ಉಪಚುನಾವಣೆ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಂಡಿದೆ. ಈ ಬಾರಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ.
ಈವರೆಗೆ ಯಾವುದೇ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡದಿದ್ದರೂ, ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ಸಂಡೂರಿನಲ್ಲಿ ಸಂಸದ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಸಂಡೂರಿನಲ್ಲಿ ತುಕಾರಾಂ ಕುಟುಂಬಕ್ಕೆ ಟಿಕೆಟ್ ಫೈನಲ್ ಮಾಡಲಾಗಿದೆ. ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡುತ್ತೇವೆ. ಇನ್ನು ಚನ್ನಪಟ್ಟಣ ಮತ್ತು ಶಿಗ್ಗಾವಿ ಕ್ಷೇತ್ರಗಳ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು,” ಎಂದರು. ಇದನ್ನು ಓದಿ –ವಸತಿ ಕಾಲೇಜಿನ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ದಾರುಣ ಸಾವು
ಸಿಪಿ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸುತ್ತಾ, “ಯೋಗೇಶ್ವರ್ ಅವರ ಕಾಂಗ್ರೆಸ್ ಪ್ರವೇಶದ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಬರುವ ಯಾರಿಗೂ ನಮ್ಮ ಪಕ್ಷದಲ್ಲಿ ಸ್ವಾಗತವಿದೆ,” ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಯೋಗೇಶ್ವರ್ ಕಾಂಗ್ರೆಸ್ ಸೇರುವ ಸುಳಿವು ನೀಡಿದರು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು