ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಮಳೆಯ ಅರ್ಭಟ ಮುಂದುವರೆಯುತ್ತಿದೆ, ಇದರಿಂದ ಜನಜೀವನ ತತ್ತರಿಸಿದೆ. ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ, ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಜೋರು ಮಳೆ ಮುಂದುವರಿಯಲಿದೆ.
ರಾಜ್ಯದ ರಾಜಧಾನಿ ಬೆಂಗಳೂರು ಮಳೆಯ ಅವಾಂತರದಿಂದ ತತ್ತರಿಸಿದೆ. ನಗರದಲ್ಲಿ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಉಲ್ಬಣಗೊಂಡಿವೆ. ಬೆಳಿಗ್ಗೆ ಬಿಸಿಲು ಕಂಡುಬಂದರೂ, ಸಂಜೆ ವೇಳೆಗೆ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 6 ದಿನಗಳವರೆಗೆ ಭಾರಿ ಮಳೆಯ ಅರ್ಭಟ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನು ಓದಿ –ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ
ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
More Stories
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ