ಕಲಬುರಗಿ :ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಸಿ, ₹34.25 ಲಕ್ಷ ಸುಲಿಗೆ ಮಾಡಿದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿಯ ಮನೆಯಲ್ಲಿ ಶೋಧ ನಡೆಸಿ, ಹಣ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಬಳೆ ಮಾರಾಟ ಮಳಿಗೆಯ ವ್ಯಾಪಾರಿಯೊಬ್ಬರು ಮಹಾರಾಷ್ಟ್ರ ಮೂಲದ ಯುವತಿಯು ಸೇರಿ ಒಂಬತ್ತು ಮಂದಿಯ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹನಿಟ್ರ್ಯಾಪ್ ಮೂಲಕ ವ್ಯಾಪಾರಿಯಿಂದ ₹34.25 ಲಕ್ಷ ಸುಲಿಗೆ ಮಾಡಲಾಗಿದೆ.
ಪ್ರಕರಣದ ಪ್ರಮುಖ ಆರೋಪಿ ರಾಜು ಲೇಂಗಟಿಯನ್ನು ಮಂಗಳವಾರ ಬಂಧಿಸಲಾಗಿದ್ದು, ಆತನಿಂದ ₹2.50 ಲಕ್ಷ ವಶಕ್ಕೆ ಪಡೆಯಲಾಗಿದೆ. ರಾಜು ಲೇಂಗಟಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನು ಓದಿ –ಬೆಂಗಳೂರು ಕಟ್ಟಡ ಕುಸಿತ: ಸಿಎಂ ಸಿದ್ದರಾಮಯ್ಯರಿಂದ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ
ಈ ಹಿಂದೆ ಬಂಧಿತನಾಗಿರುವ ಮೊದಲ ಆರೋಪಿಯಾಗಿರುವ ಪ್ರಭುಲಿಂಗ ಹಿರೇಮಠನ ಮನೆಯನ್ನು ಶೋಧ ಮಾಡಿದ್ದು, ₹1.46 ಲಕ್ಷ ನಗದು, 55 ಗ್ರಾಂ ಚಿನ್ನ, ಹಾಗೂ ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಇದರಿಂದಾಗಿ ಇಬ್ಬರು ಆರೋಪಿಗಳಿಂದ ಒಟ್ಟು ₹3.95 ಲಕ್ಷ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು