ದೆಹಲಿ: ದೇಶದ ಜನಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು 2025ರಲ್ಲಿ ಆರಂಭಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ
ಈ ಪ್ರಕ್ರಿಯೆ 2025ರಲ್ಲಿ ಆರಂಭಗೊಂಡು 2026ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಜನಗಣತಿ ಪ್ರಕ್ರಿಯೆಯ ಬಳಿಕ 2028ರಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.
ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರಗಳ ಪುನರ್ ವಿಂಗಡನೆ ನಡೆಸುವ ಬಗ್ಗೆ ಸರ್ಕಾರಿ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಆದರೆ, ಇದುವರೆಗೂ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.ಇದನ್ನು ಓದಿ –ಕಾಲು ಜಾರಿ ಕೆರೆಯಲ್ಲಿ ಬಿದ್ದ ಯುವತಿ ದುರ್ಮರಣ
ಮೊದಲಿಗೆ 2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ ಕೋವಿಡ್-19 ಕಾರಣದಿಂದ ಜನಗಣತಿಯನ್ನು ಮುಂದೂಡಲಾಗಿತ್ತು. ಲೋಕಸಭಾ ಕ್ಷೇತ್ರ ಪುನರ್ ವಿಂಗಡನೆಯಾಗುವ ಸಮಯದಲ್ಲಿ ಮಹಿಳಾ ಮೀಸಲಾತಿಯ ಅನುಷ್ಠಾನವೂ ಜಾರಿಗೆ ಬರುವ ಸಾಧ್ಯತೆಯಿದೆ.
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು