ಬೆಂಗಳೂರು: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆಗಾಗಿ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.
40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಹೆಚ್.ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.
ಚುನಾವಣಾ ಆಯೋಗಕ್ಕೂ ಪಟ್ಟಿಯನ್ನು ರವಾನೆ ಮಾಡಿದ್ದಾರೆ. ಆದರೆ,ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ.
ಜೆಡಿಎಸ್ ಸ್ಟಾರ್ ಕ್ಯಾಂಪೇನರ್ಗಳ ಪಟ್ಟಿಯಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ, ಹಾಲಿ ಸಂಸದರು, ಹಿರಿಯ ನಾಯಕರು, ಮಾಜಿ, ಹಾಲಿ ಎಂಎಲ್ಸಿಗಳು ಸೇರಿ ಒಟ್ಟು 40 ಪ್ರಚಾರಕರ ಹೆಸರು ಇದ್ದು ಪಕ್ಷದ ಹಿರಿಯ ನಾಯಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಅವರ ಹೆಸರನ್ನು ಮಾತ್ರ ನಮೂದು ಮಾಡಿಲ್ಲ.
ಇತ್ತೀಚೆಗೆ ಮುಡಾ ಪ್ರಕರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕೆಂಬ ಒತ್ತಾಯದ ವಿಚಾರಕ್ಕೆ ಸಂಬಂಧಿಸಿದಂತೆ ಜಿ.ಟಿ ದೇವೇಗೌಡ ದಸರಾ ಉದ್ಘಾಟನಾ ವೇದಿಕೆಯಲ್ಲಿ ಮಾತನಾಡಿದ್ದರು.ಇದನ್ನು ಓದಿ –ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರಿ ಮಳೆ ಸಂಭವ
ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದ ಜಿಟಿ ದೇವೇಗೌಡ ಅವರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆಗೆ ಸ್ಟಾರ್ ಪ್ರಚಾರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
More Stories
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ
ಮುಂದಿನ ಐದು ದಿನ ರಾಜ್ಯದ ಹಲವಡೆ ಭಾರಿ ಮಳೆ ಸಂಭವ
ಒಂದೇ ಗ್ರಾಮದ 350 ರೈತರ 960 ಎಕರೆ ಜಮೀನು ವಕ್ಫ್ ಬೋರ್ಡ್ಗೆ ಸೇರ್ಪಡೆ – ರೈತರ ತೀವ್ರ ಆಕ್ರೋಶ