ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಳ್ಳಿ ಗ್ರಾಮದಲ್ಲಿ ಭೀಕರ ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ, ಕಾರಿನಲ್ಲಿದ್ದ ಚಾಲಕ ಸಜೀವವಾಗಿ ದಹನಗೊಂಡಿದ್ದಾರೆ.
ಮೃತಪಟ್ಟವರನ್ನು ಇಬ್ರಾಹಿಂ (48) ಎಂದು ಗುರುತಿಸಲಾಗಿದೆ. ಇಬ್ರಾಹಿಂ ವ್ಯಾಪಾರ ಮುಗಿಸಿಕೊಂಡು ಒಮಿನಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದರು.
ಈ ವೇಳೆ, ಅವರೆದುರು ಬಂದ ಅಸಾವಧಾನತೆಯಿಂದ ಕಾರು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಹಳ್ಳಕ್ಕೆ ಬಿದ್ದ ನಂತರ ಕಾರಿನಲ್ಲಿ ತಕ್ಷಣವೇ ಬೆಂಕಿ ಹೊತ್ತಿಕೊಂಡು, ಕಾರಿನ ಸಮೇತ ಚಾಲಕ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ.ಇದನ್ನು ಓದಿ –ಬ್ಯಾಂಕ್ ಆಫ್ ಬರೋಡಾ: 592 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಮೃತದೇಹವನ್ನು ಚಿಂತಾಮಣಿ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ