ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ದೇವಸ್ಥಾನ ಮತ್ತು ಸರ್ಕಾರಿ ಶಾಲೆಗಳ ಬಳಿಕ ಈಗ ಹಿಂದೂ ಸಮುದಾಯದ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ದಾಖಲು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೊಪ್ಪ ಗ್ರಾಮದ ಸರ್ವೆ ನಂಬರ್ 438ರಲ್ಲಿ ಇರುವ 1.37 ಗುಂಟೆ ಸ್ಮಶಾನ ಜಮೀನನ್ನು ವಕ್ಫ್ ಆಸ್ತಿಯಾಗಿ ಉಲ್ಲೇಖಿಸಲಾಗಿದೆ. 2019ರ ವರೆಗೆ ಈ ಜಮೀನು ಸರ್ಕಾರಿ ಸ್ಮಶಾನವೆಂದು ಆರ್‌ಟಿಸಿಯಲ್ಲಿ ದಾಖಲಾಗಿತ್ತು. ಆದರೆ 2019ರ ನಂತರದ ದಾಖಲೆಗಳಲ್ಲಿ ಈ ಜಾಗವನ್ನು ವಕ್ಫ್ ಆಸ್ತಿಯೆಂದು ಬರೆದುಹೋಗಿದೆ.
ವಕ್ಫ್ ಆಸ್ತಿ ವಿವಾದ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪ ಗ್ರಾಮದ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ ಈ ವಿಷಯ ಬೆಳಕಿಗೆ ಬಂದಿದೆ.ಇದನ್ನು ಓದಿ – MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
ಕೂಡಲೇ ಈ ತಪ್ಪನ್ನು ಸರಿಪಡಿಸಲು ಹಾಗೂ ತಪ್ಪು ದಾಖಲೆಯನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ