ದೆಹಲಿ: ದೀಪಾವಳಿ ಹಬ್ಬದ ನಂತರ ದೇಶದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಕಾಣಿಸಿದೆ. ದೇಶದ ವಿವಿಧೆಡೆ ಚಳಿ ಹೆಚ್ಚುತ್ತಿರುವ ನಡುವೆಯೇ, ಹವಾಮಾನ ಇಲಾಖೆಯು ಮತ್ತೊಮ್ಮೆ ಸೈಕ್ಲೋನಿಕ್ ಚಂಡಮಾರುತದ ಎಚ್ಚರಿಕೆಯನ್ನು ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಸೈಕ್ಲೋನಿಕ್ ಚಂಡಮಾರುತದ ಪರಿಸ್ಥಿತಿ:
ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಚಂಡಮಾರುತದ ವಾತಾವರಣ ಉಂಟಾಗುತ್ತಿದ್ದು, ವೆಸ್ಟರ್ನ್ ಡಿಸ್ಟರ್ಬನ್ಸ್ ಸಕ್ರಿಯಗೊಳ್ಳಲಿದೆ. ಇದರಿಂದ ಕರಾವಳಿ ರಾಜ್ಯಗಳಲ್ಲಿ ಮಳೆಯಾಗುವ ಸಂಭವವಿದೆ. ಚಂಡಮಾರುತದ ಪರಿಣಾಮವಾಗಿ ಮಿಂಚು, ಗುಡುಗು ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯೂ ಇದೆ. ದಕ್ಷಿಣ ಭಾರತ ಮತ್ತು ಉತ್ತರ ಭಾರತದ ಹಲವಾರು ರಾಜ್ಯಗಳಲ್ಲಿ ನವೆಂಬರ್ 12 ರವರೆಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಮಳೆ ಬೀಳುವ ರಾಜ್ಯಗಳ ಪಟ್ಟಿ ಮತ್ತು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಚಂಡಮಾರುತದ ಅಲೆಯ ಇಂಪ್ಯಾಕ್ಟ್:
ಹವಾಮಾನ ಇಲಾಖೆಯ ಪ್ರಕಾರ, ಈ ಚಂಡಮಾರುತವು ತೀವ್ರಗೊಳ್ಳುವ ಸಾಧ್ಯತೆಯಿದ್ದು, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಪುದುಚೇರಿ, ಮಣಿಪುರ, ನಾಗಾಲ್ಯಾಂಡ್, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ, ನವೆಂಬರ್ 8 ರಿಂದ 10 ರವರೆಗೆ ಕೇರಳ, ಕರ್ನಾಟಕ, ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆಯ ಸಂಭವವಿದೆ.ಇದನ್ನು ಓದಿ –ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ
ಕಳೆದ 24 ಗಂಟೆಗಳ ತಾಪಮಾನ ಪ್ರಮಾಣ:
ಹವಾಮಾನ ಇಲಾಖೆ ಪ್ರಕಾರ, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ತಾಪಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆ ಇಲ್ಲ. ಪಶ್ಚಿಮ ಮಧ್ಯಪ್ರದೇಶ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ತಾಪಮಾನ ಸ್ಥಿರವಾಗಿಯೇ ಇದೆ.
More Stories
ಮಂಗಳೂರಿನಲ್ಲಿ ಬಾಲಕಿಗೆ ಸಾಮೂಹಿಕ ಅತ್ಯಾಚಾರ – ಮೂವರಿಗೆ ಜೀವಾವಧಿ ಶಿಕ್ಷೆ
ಥಿಯೇಟರ್ ಮಾಲೀಕನನ್ನು ಕಟ್ಟಿಹಾಕಿ ಮನೆಯ ಕೆಲಸದವರಿಂದ ಕಳ್ಳತನ – ದಂಪತಿ ಬಂಧನ
ನಾಲ್ವರು ಕೆ.ಎ.ಎಸ್. ಅಧಿಕಾರಿಗಳ ವರ್ಗಾವಣೆ