ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370ನೇ ವಿಧಿಯ ಮರು ಜಾರಿಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಹೇರುವ ಪ್ರಸ್ತಾವನೆಯನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಭಾರೀ ಗದ್ದಲದ ನಡುವೆ ಅಂಗೀಕರಿಸಿದೆ.
370ನೇ ವಿಧಿಯ ಮರು ಜಾರಿಗೆ ಒಪ್ಪಿಗೆ ನೀಡುತ್ತಿದ್ದಂತೆಯೇ, ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಪಿಡಿಪಿ ಸದಸ್ಯರು ನಡುವೆ ತೀವ್ರ ವಿವಾದ ಏಳಿದ್ದು, ಹಗುರವಾದ ಹೊಡೆದಾಟಕ್ಕೂ ದಾರಿಯಾಯಿತು. ಬಿಜೆಪಿ ಸದಸ್ಯರು ಈ ನಿರ್ಣಯದ ಪ್ರತಿಯನ್ನು ಹರಿದು ಕೋಪ ವ್ಯಕ್ತಪಡಿಸಿದರು.
ಸಭೆಯ ಆರಂಭದಲ್ಲೇ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಪ್ರಸ್ತಾವನೆ ಮಂಡಿಸಿದ್ದು, ಈ ವಿಶೇಷ ಸ್ಥಾನಮಾನವು ಜಮ್ಮು ಮತ್ತು ಕಾಶ್ಮೀರದ ಜನರ ಹೆಗ್ಗುರುತು, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಭರವಸೆಯನ್ನು ನೀಡುತ್ತವೆ ಎಂದು ಅವರು ತಿಳಿಸಿದರು.
ಇದನ್ನು ಓದಿ – ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ – ಹವಾಮಾನ ಇಲಾಖೆ
370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರದ ಕ್ರಮವನ್ನು ತೀವ್ರವಾಗಿ ವಿರೋಧಿಸುವಂತೆಯೂ, ಈ ಸ್ಥಾನಮಾನವನ್ನು ಮತ್ತೆ ನೀಡುವಂತೆ ಒತ್ತಾಯಿಸಿದರು.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ