ಬೆಂಗಳೂರು: ಬೆಂಗಳೂರಿನ ಶೆಡ್‌ನಲ್ಲಿ ನಡೆದ ಡಬಲ್ ಮರ್ಡರ್ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದ ಎಸ್.ಆರ್.ಎಸ್. ಟ್ರಾವೆಲ್ಸ್ ಬಸ್ ಶೆಡ್‌ನಲ್ಲಿ ಈ ಹತ್ಯೆ ಪ್ರಕರಣ ನಡೆದಿದೆ, ಇದರಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಕೊಲೆ ಆರೋಪಿಯಾಗಿರುವ ಸುರೇಶ್‌ನ್ನು ಪೊಲೀಸರು ಬಂಧಿಸಿದ್ದು, ಅವನು ಬಸ್ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದನು. ಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ.
ಇದನ್ನು ಓದಿ –ರಾಜ್ಯದಲ್ಲಿ ಮಳೆಯ ಮುನ್ಸೂಚನೆ: ಹಲವೆಡೆ ಮಳೆಯಾಗುವ ಸಾಧ್ಯತೆ
ನಾಗೇಶ್ (55) ಹಾಗೂ ಮಂಜುನಾಥ್ (50) ಮೃತ ದುರ್ದೈವಿಗಳು. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ಹತ್ಯೆಯಾಗಿರಬಹುದೆಂದು ಶಂಕಿಸಲಾಗಿದೆ. ಬಾಗಲೂರು ಠಾಣೆ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ