November 23, 2024

Newsnap Kannada

The World at your finger tips!

rto , lokayukta , Karnataka

ರಾಜ್ಯದ ಹಲವೆಡೆ ಲೋಕಾಯುಕ್ತದಿಂದ ದಾಳಿ – ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಪರಿಶೀಲನೆ

Spread the love

ಇಂದು ಬೆಳಗ್ಗೆಯೇ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಸಹಾಯಕ ನಿರ್ದೇಶಕ ಕಮಲ್ ರಾಜ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಎಸ್‌ಪಿ ಎಂ.ಎಸ್.ಕೌಲಾಪುರೇ ನೇತೃತ್ವದಲ್ಲಿ, ಸಿಪಿಐ ಮಧುಸೂಧನ್ ಮತ್ತು ಪ್ರಭು ಸೇರಿ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದು, ಮನೆಯ ಪ್ರತಿಯೊಂದು ಕೋಣೆಯನ್ನು ಪರಿಶೀಲಿಸಿದ್ದಾರೆ.

ಧಾರವಾಡದಲ್ಲಿಯೂ ಕೂಡ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದ್ದು, ಆಸ್ತಿ ದಾಖಲೆಗಳನ್ನು ಪರಿಶೀಲಿಸಲಾಗಿದೆ. ಧಾರವಾಡ, ಸವದತ್ತಿ ಹಾಗೂ ನರಗುಂದದಲ್ಲಿ ಗಾಂಧಿನಗರ ಬಡಾವಣೆಯಲ್ಲಿನ ಭಜಂತ್ರಿ ಅವರ ಸಂಬಂಧಿತ ಸ್ಥಳಗಳಲ್ಲಿ ಒಟ್ಟು ಆರು ಕಡೆ ದಾಳಿ ನಡೆದಿದ್ದು, ಬೇರೆ ಬೇರೆ ಕಡೆ ಆಸ್ತಿ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.

ಸವದತ್ತಿ ತಾಲ್ಲೂಕಿನ ಹೂಲಿ ಮತ್ತು ಉಗರಗೋಳ ಗ್ರಾಮಗಳಲ್ಲಿನ ಫಾರ್ಮ್ ಹೌಸ್‌ಗಳ ಮೇಲೆ ರೇಡ್ ಮಾಡಲಾಗಿದ್ದು, ಧಾರವಾಡ ಲಕಮನಹಳ್ಳಿಯ ಕೆಐಎಡಿಬಿ ಕಚೇರಿಯು ಸಹ ಪರಿಶೀಲನೆಗೆ ಒಳಗಾಗಿದೆ. ನರಗುಂದದಲ್ಲಿರುವ ಸಹೋದರನ ಮನೆಯ ಮೇಲೂ ದಾಳಿ ಮಾಡಿದ್ದು, ಗೋವಿಂದಪ್ಪನ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಸಹ ಪರಿಶೀಲಿಸಲಾಗಿದೆ.ಇದನ್ನು ಓದಿ –ತಂದೆಯಾದ ಅಭಿಷೇಕ್: ಮರಿ ರೆಬಲ್ ಸ್ಟಾರ್ ಗೆ ಜನ್ಮ ನೀಡಿದ ಅವಿವಾ

ಬೀದರ್ ಜಿಲ್ಲೆಯಲ್ಲಿ ಸಹ ಎರಡು ಸ್ಥಳಗಳಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಆರೋಪದ ಮೇಲೆ, ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!