ಮಂಡ್ಯ: ಅಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ನಗರಸಭೆಯ ಆಯುಕ್ತನಾಗಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಅವರ ಶ್ರೀರಂಗಪಟ್ಟಣದ ಮನೆ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸ್ ತಂಡ ದಾಳಿ ನಡೆಸಿದ್ದು, ವಿವಿಧ ಆಸ್ತಿ ದಾಖಲಾತಿಗಳನ್ನು ಪರಿಶೀಲಿಸುತ್ತಿದೆ.
ನಾಗೇಶ್ ಇತರ ಅಧಿಕಾರಿಗಳಾಗಿ ಇದ್ದಾಗ, ಅವರು ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್‌ಮೆಂಟ್ ನಿರ್ಮಿಸಿದ್ದು, ಅದರ ಪಕ್ಕದ ಬಾಡಿಗೆ ಮನೆ ಮೇಲೂ ದಾಳಿ ನಡೆದಿದೆ. ರಾಜ್ಯದ ಹಲವೆಡೆ ಲೋಕಾಯುಕ್ತದಿಂದ ದಾಳಿ – ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಪರಿಶೀಲನೆ
ಪರಿಶೀಲನೆಯಲ್ಲಿ ಅಕ್ರಮ ಆಸ್ತಿ ಮತ್ತು ದಾಖಲೆಗಳನ್ನು ಪರಿಶೀಲಿಸುವ ಕಾರ್ಯ ತೀವ್ರಗೊಂಡಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು