ವಯನಾಡು:ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿ, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಘಟನೆ ಜರುಗಿದೆ.
ಇಬ್ಬರು ಮಕ್ಕಳು ಸೇರಿದಂತೆ 45 ಜನರಿದ್ದ ಬಸ್ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ, ಮೈಸೂರಿನ ಹುಣಸೂರಿಗೆ ಹಿಂದಿರುಗುವಾಗ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಇದನ್ನು ಓದಿ –ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
ಗಾಯಾಳುಗಳನ್ನು ತಕ್ಷಣವೇ ವಯನಾಡಿನ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಗಾಯಗೊಂಡ ಎಲ್ಲಾ ಪ್ರಯಾಣಿಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು