January 28, 2026

Newsnap Kannada

The World at your finger tips!

WhatsApp Image 2024 12 02 at 12.10.31 PM

ತುಮಕೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ

Spread the love

ತುಮಕೂರು: ತಾಲ್ಲೂಕಿನ ಕೋರ ಹೋಬಳಿಯ ಪಿ.ಗೊಲ್ಲಹಳ್ಳಿ ಬಳಿಯ 41 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಸುಮಾರು ₹150 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಕ್ರೀಡಾಂಗಣದ ಕಾಮಗಾರಿ ಮುಂದಿನ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (ಕೆಸಿಎ) ಗೆ ಭೂಮಿಯನ್ನು ಈಗಾಗಲೇ ಹಸ್ತಾಂತರಿಸಲಾಗಿದೆ.



ಇದನ್ನು ಓದಿ – ಬಲೂನ್ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದಾರುಣ ಮೃತ್ಯು

ಈ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ, ಸಚಿವರಾದ ಕೆ.ಎನ್. ರಾಜಣ್ಣ, ಪ್ರಿಯಾಂಕ್ ಖರ್ಗೆ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಶಾಸಕರಾದ ಎಸ್.ಆರ್. ಶ್ರೀನಿವಾಸ್, ಬಿ. ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ರಘುರಾಮ್ ಭಟ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

error: Content is protected !!