ಮೈಸೂರು: ಮೈಸೂರಿನ ಹೆಚ್.ಡಿ.ಕೋಟೆ ಘಟಕಕ್ಕೆ ಸೇರಿದ KSRTC ಬಸ್ ಒಂದಿಗೆ ಚಲಿಸುತ್ತಿರುವಾಗಲೇ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಡಾಡಿಯಿಂದ ಹೆಚ್.ಡಿ.ಕೋಟೆ ಕಡೆಗೆ ಸಾಗುತ್ತಿದ್ದ ಬಸ್ ದೇವಲಾಪುರ-ಜಕ್ಕಹಳ್ಳಿ ಗ್ರಾಮದ ಮಾರ್ಗದಲ್ಲಿ ಬೆಂಕಿಗೆ ಆಹುತಿಯಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಪ್ರಯಾಣಿಕರು ತಕ್ಷಣವೇ ಬಸ್‌ನಿಂದ ಕೆಳಗೆ ಇಳಿದು ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ.
ಇದನ್ನು ಓದಿ –ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ಮಾಹಿತಿ ಸಿಕ್ಕ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
More Stories
ಕರ್ನಾಟಕದಲ್ಲಿ ‘ಪುಷ್ಪ 2’ಗೆ ಶಾಕ್- ಪ್ರದರ್ಶನ ರದ್ದಿಗೆ ಆದೇಶ
ಮುಂದಿನ ಪೀಳಿಗೆಗೊಂದು ಉತ್ತಮ ಸಂದೇಶ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ