January 28, 2026

Newsnap Kannada

The World at your finger tips!

WhatsApp Image 2024 12 04 at 7.36.54 PM

ಕರ್ನಾಟಕದಲ್ಲಿ ‘ಪುಷ್ಪ 2’ಗೆ ಶಾಕ್- ಪ್ರದರ್ಶನ ರದ್ದಿಗೆ ಆದೇಶ

Spread the love

ಬೆಂಗಳೂರು : ಅಲ್ಲು ಅರ್ಜುನ್ ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ಗೆ ಚಿತ್ರಕ್ಕೆ ಕರ್ನಾಟಕದಲ್ಲೂ ಫ್ಯಾನ್ಸ್ ಇದ್ದಾರೆ. ಹೀಗಿರುವಾಗ ಚಿತ್ರತಂಡಕ್ಕೆ ಬೆಂಗಳೂರು ಜಿಲ್ಲಾಧಿಕಾರಿ ಶಾಕ್‌ ನೀಡಿದ್ದಾರೆ.

ಸಮಯ ಪಾಲನೆ ಮಾಡದೇ ‘ಪುಷ್ಪ 2’ ಚಿತ್ರ ಪ್ರದರ್ಶನಕ್ಕೆ ಮುಂದಾದ ಥಿಯೇಟರ್‌ಗೆ ಬೆಂಗಳೂರು ಜಿಲ್ಲಾಧಿಕಾರಿ ಶಾಕ್ ನೀಡಿದ್ದಾರೆ.

ಬೆಂಗಳೂರು ಕೆಲವು ಚಿತ್ರಮಂದಿರಗಳು ನಿಗದಿಪಡಿಸಿದ ಅವಧಿಗೂ ಮುನ್ನ ‘ಪುಷ್ಪ 2’ ಸಿನಿಮಾವನ್ನು ಪ್ರದರ್ಶನ ಮಾಡುತ್ತಿದೆ. ಕರ್ನಾಟಕದಲ್ಲಿ ಯಾವುದೇ ಸಿನಿಮಾವನ್ನು ಬೆಳಗ್ಗೆ 6 ಗಂಟೆಗೂ ಮುನ್ನ ಪ್ರದರ್ಶನ ಮಾಡಬಾರದೆಂಬ ರಾಜ್ಯ ಸರ್ಕಾರದ ನಿಯಮವಿದೆ. ಹೀಗಿದ್ದರೂ ‘ಪುಷ್ಪ 2’ ಚಿತ್ರ ಪ್ರದರ್ಶನ ಮಾಡುತ್ತಿರುವ ಚಿತ್ರಮಂದಿರದ ಮಾಲೀಕರು ಬೆಳ್ಳಂಬೆಳಗೆ 3.45ರಿಂದ ಅಭಿಮಾನಿಗಳಿಗಾಗಿ ವಿಶೇಷ ಪ್ರದರ್ಶನವನ್ನು ಏರ್ಪಡಿಸಿದೆ. ಇದನ್ನು ಇದಕ್ಕೆ ಬೆಂಗಳೂರು ಜಿಲ್ಲಾಧಿಕಾರಿ ಕಡಿವಾಣ ಹಾಕಿದ್ದಾರೆ.

ಚಲನಚಿತ್ರ ಪ್ರದರ್ಶನ ನಿಯಮದ ಪ್ರಕಾರ, ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಮುಂಜಾನೆ 6 ಗಂಟೆಯ ಒಳಗೆ ಯಾವುದೇ ಚಿತ್ರಮಂದಿರಗಳಲ್ಲಿ ಚಿತ್ರಗಳನ್ನು ಪ್ರದರ್ಶನ ಮಾಡುವಂತೆ ಇಲ್ಲ ಎಂಬ ರಾಜ್ಯ ಸರ್ಕಾರದ ಆದೇಶವಿದ್ದರೂ ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಅವಧಿಗೂ ಮುನ್ನ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಕಾನೂನು ಬಾಹಿರವಾಗಿರುತ್ತದೆ.ಇದನ್ನು ಓದಿ – ಮುಂದಿನ ಪೀಳಿಗೆಗೊಂದು ಉತ್ತಮ ಸಂದೇಶ

43 ಥಿಯೇಟರ್‌ಗಳ ವಿರುದ್ಧ ಸಿನಿಮಾ ಪ್ರದರ್ಶನ ಮಾಡದಂತೆ ಬೆಂಗಳೂರು ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದಾರೆ.

error: Content is protected !!