ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 8ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ತೋರಿಸಲಾಗಿದೆ.
ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಬೆಂಗಳೂರು ನಗರ, ತುಮಕೂರು, ರಾಯಚೂರು, ಬೀದರ್, ಧಾರವಾಡ, ಕೊಪ್ಪಳ, ಹಾವೇರಿ, ಮತ್ತು ಗದಗ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇಂದು ಮತ್ತು ನಾಳೆ ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.ಇದನ್ನು ಓದಿ – ಮೈಶುಗರ್ ಕಾರ್ಖಾನೆ ನೌಕರರಿಗೆ ಎರಡು ತಿಂಗಳಿಂದ ಸಂಬಳದ ತೊಂದರೆ: ಬೀದಿಗಿಳಿದ ಪ್ರತಿಭಟನೆ
ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ, ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರಬಹುದು. ಇನ್ನುಳಿದ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ