ಪಕ್ಷ ವಿರೋಧ ಚಟುವಟಿಕೆ ಮಾಡಿರುವ ಅಮರಾವತಿ ಚಂದ್ರಶೇಖರ್ ಮತ್ತು ಸಹೋದರರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಕೋರಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರಿಗೆ ಪತ್ರ ಬರೆದಿದ್ದಾರೆ.
ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣರಾದ ಅಮರಾವತಿ ಚಂದ್ರಶೇಖರ್ ಮತ್ತು ಅಮರಾವತಿ ಅಶ್ವತ್ಥ್ ರವರನ್ನು ಪಕ್ರದಿಂದ ಉಚ್ಛಾಟಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಕೂಗು ಹಾಕಿದ್ದಾರೆ.
ಅಮರಾವತಿ ಚಂದ್ರಶೇಖರ್ ರವರು ಹಣ ಮತ್ತು ಅಧಿಕಾರಕ್ಕಾಗಿ ಎಂತಹ ಹೀನ ಕೃತ್ಯಕ್ಕೂ ಕೈ ಹಾಕುತ್ತಾರೆ ಹಾಗೂ ಕಾಂಗ್ರೆಸ್ ಪಕ್ಷದ ವಿರೋಧಿಗಳ ಜೊತೆ ಕೈ ಜೋಡಿಸುತ್ತಾರೆ ಎಂಬುದಕ್ಕೆ ಹಲವು ಉದಾಹರಣೆಗಳು ಇವೆ. ಹೀಗೆ ಪ್ರತಿ ಚುನಾವಣೆಗಳಲ್ಲಿ ವಿರೋಧ ಪಕ್ಷಗಳ ಜೊತೆ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೂ ಕಾರಣವಾಗುತ್ತಾ, ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಪೂರಕವಾಗಿ ಕಾಂಗ್ರೆಸ್ ಪಕ್ಷದ ವಿರೋಧಿ ಚಟುವಟಿಕೆ ಮಾಡಿಕೊಂಡು ಬಂದಿರುವಂತಹ ಇವರನ್ನು ಈ ಕೂಡಲೇ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡುವುದರ ಜೊತೆಗೆ ಪಕ್ಷದಲ್ಲಿ ಕಡ್ಡಾಯವಾಗಿ ಶಿಸ್ತನ್ನು ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ಮೂಲಕ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಆಗಿರುವ ನೋವನ್ನು ಸರಿಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಕೆ.ಪಿ.ಸಿ.ಸಿ ಕಛೇರಿಯ ನ ಮುಂದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು