ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ ಡಿಸೆಂಬರ್ 8ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಈ ಪರೀಕ್ಷೆಯನ್ನು ಆಯೋಜಿಸಿದ್ದು, 3,86,099 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
30 ಜಿಲ್ಲೆಗಳ 26 ತಾಲ್ಲೂಕು ಕೇಂದ್ರಗಳಲ್ಲಿ 1035 ಉಪ ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ವೇಳಾಪಟ್ಟಿ:
ಡಿಸೆಂಬರ್ 7ರಂದು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 8ರಂದು ಬೆಳಿಗ್ಗೆ 10ರಿಂದ 11:30ರವರೆಗೆ ಸಾಮಾನ್ಯ ಜ್ಞಾನ ಮತ್ತು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಮತ್ತು ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ.
- ಮುನ್ನೆಚ್ಚರಿಕೆ ಕ್ರಮಗಳು:
ಪರೀಕ್ಷೆಗಳು ಶಾಂತಯುತವಾಗಿ ನಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. - ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
- ಶೌಚಾಲಯ, ಕುಡಿಯುವ ನೀರು, ಬೆಳಕು, ಶುದ್ಧ ಗಾಳಿ, ಮತ್ತು ಗೋಡೆಗಡಿಯಾರಗಳು ಪ್ರತಿ ಕೊಠಡಿಯಲ್ಲಿ ಲಭ್ಯವಿರಬೇಕು.
- ಸಿ.ಸಿ. ಕ್ಯಾಮೆರಾ ವ್ಯವಸ್ಥೆ ಪ್ರತಿ ಕೋಣೆಯಲ್ಲಿ ಅಳವಡಿಸಲಾಗಿದೆ.
- ನಿಷೇಧಿತ ವಸ್ತುಗಳು:
- ಸ್ಮಾರ್ಟ್ ವಾಚ್, ವಿದ್ಯುತ್ ಉಪಕರಣಗಳು, ಕ್ಯಾಲ್ಕ್ಯುಲೇಟರ್, ಮೊಬೈಲ್ ಫೋನ್ ತರುವುದು ನಿಷೇಧ.
- ಮಹಿಳೆಯರು ಮಾಂಗಲ್ಯಸರ ಮತ್ತು ಕಾಲುಂಗುರು ಹೊರತುಪಡಿಸಿ ಇತರ ಆಭರಣಗಳನ್ನು ಧರಿಸಬಾರದು.
- ಪುರುಷರು ಫುಲ್ ಶರ್ಟ್, ಫ್ಯಾನ್ಸಿ ಪ್ಯಾಂಟ್, ಶೂ-ಸಾಕ್ಸ್ ಧರಿಸಬಾರದು.
ಪರೀಕ್ಷಾ ಕೇಂದ್ರದ ನಿಯಮಗಳು:
- ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ.
- ಟೈಪಿಂಗ್, ಫ್ಯಾಕ್ಸ್, ಝೆರಾಕ್ಸ್ ಅಂಗಡಿಗಳು ಮುಚ್ಚಿರಬೇಕು.
- ಪರೀಕ್ಷಾರ್ಥಿಗಳ ಹೊರತಾಗಿ ಇತರರು ಕೇಂದ್ರದೊಳಗೆ ಪ್ರವೇಶಿಸಲು ಅನುಮತಿ ಇಲ್ಲ.ಇದನ್ನು ಓದಿ –ಶೀಘ್ರದಲ್ಲೇ ವಿದ್ಯುತ್ ದರ ಏರಿಕೆಯ ಸಾಧ್ಯತೆ
ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ ಎಂದು KPSC ಸೂಚಿಸಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ