March 12, 2026

Newsnap Kannada

The World at your finger tips!

brungesh

ಸಿಎಂ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ನೇಮಕ

Spread the love

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ. 

ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೆಲ ದಿನಗಳ ಹಿಂದಷ್ಟೇ ರಾಜೀನಾಮೆ ನೀಡಿದ್ದರು. 

ಮಹದೇವ್ ಪ್ರಕಾಶ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸಿಎಂ ಮುಖ್ಯ ಕಾರ್ಯದರ್ಶಿಗೆ ಯಡಿಯೂರಪ್ಪ ಮಂಗಳವಾರ ಸೂಚಿಸಿದ್ದರು. 

ಇದರಂತೆ ಎನ್.ಭೃಂಗೀಶ್ ಅವರನ್ನು ಕೂಡಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

error: Content is protected !!