January 28, 2026

Newsnap Kannada

The World at your finger tips!

leopard , attack ,

ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆ

Spread the love

ತುಮಕೂರು: ಸಿದ್ದಗಂಗಾ ಹಳೆಮಠದ ಆವರಣದಲ್ಲಿ ಶನಿವಾರ ಮಧ್ಯರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ. ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಸ್ಮೃತಿ ವನದ ಬಳಿ ಚಿರತೆ ಸಂಚರಿಸಿದ್ದು, ಆವರಣದಲ್ಲಿದ್ದ ನಾಯಿಯೊಂದು ಬೊಗಳಿದ ನಂತರ ಚಿರತೆ ಅಲ್ಲಿಂದ ಓಡಿದೆ.

ಮಠದ ಸಿಬ್ಬಂದಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಚಿರತೆಯನ್ನು ಸೆರೆಹಿಡಿಯಲು ಬೋನು ಅಳವಡಿಸಿದ್ದಾರೆ.

ಚಿರತೆ ನಾಯಿ ಬೇಟೆಯಾಡಲು ಮಠದ ಆವರಣಕ್ಕೆ ಬಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಈ ಪ್ರದೇಶದಲ್ಲಿ ಕರಡಿ ಮತ್ತು ಚಿರತೆಗಳ ಸಂಚಾರ ಸಾಮಾನ್ಯವಾಗಿ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಇದನ್ನು ಓದಿ –ಮನೆಯಲ್ಲೇ ಬಾಂಬ್ ತಯಾರಿಕೆ ವೇಳೆ ಸ್ಫೋಟ: ಮೂವರು ದುರ್ಮರಣ

ಶನಿವಾರ ಬೆಳಗಿನ ಜಾವ, ಸಪ್ತಗಿರಿ ಬಡಾವಣೆಯ ಟಿ.ಪಿ.ಕೈಲಾಸಂ ರಸ್ತೆಯಲ್ಲಿಯೂ ಚಿರತೆ ಸಂಚರಿಸಿದ್ದು, ಹತ್ತಿರದ ಮನೆಯ ಸಿಸಿಟಿವಿ ದೃಶ್ಯಗಳಲ್ಲಿ ಚಿರತೆಯ ಓಡಾಟ ಸೆರೆಯಾಗಿದೆ. ಈ ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

error: Content is protected !!