ಮೈಸೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಮಾಹಿತಿ ಆಧಾರವಾಗಿ, ಮೈಸೂರಿನ ಬಸವನಗುಡಿ ವೃತ್ತದ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ಐವರು ಮಹಿಳೆಯರನ್ನು ರಕ್ಷಿಸಿದ್ದು, ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಕಾರ್ಯಾಚರಣೆ ವಿವರ:
ಮೈಸೂರಿನ ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಗುಡಿ ವೃತ್ತದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು “ಒಡನಾಡಿ” ಸಂಸ್ಥೆ ಮುಖ್ಯಸ್ಥ ಸ್ಟ್ಯಾನ್ಲಿ ಪರುಶು ಪೊಲೀಸರಿಗೆ ಮಾಹಿತಿ ನೀಡಿದರು. ಈ ಮಾಹಿತಿ ಹಿನ್ನೆಲೆ, ಎಸಿಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಪೊಲೀಸ್ ತಂಡ ಮನೆ ಮೇಲೆ ದಾಳಿ ನಡೆಸಿತು.
ದಾಳಿಯ ವೇಳೆ ಹಾಸನ, ಮೈಸೂರು ಮತ್ತು ಕೆ.ಆರ್. ನಗರ ಪ್ರದೇಶದ ಐವರು ಮಹಿಳೆಯರನ್ನು ಸುರಕ್ಷಿತವಾಗಿ ಹೊರತೆಗೆಯಲಾಯಿತು. ಜೊತೆಗೆ, ವೇಶ್ಯಾವಾಟಿಕೆಯನ್ನು ನಡೆಸುತ್ತಿದ್ದ ಮಹಿಳೆ ಹಾಗೂ ಒಬ್ಬ ಗ್ರಾಹಕರನ್ನು ಪೊಲೀಸರು ಸ್ಥಳದಲ್ಲಿಯೇ ಬಂಧಿಸಿದ್ದಾರೆ.ಇದನ್ನು ಓದಿ –ಡ್ರೋನ್ ಪ್ರತಾಪ್ ಡಿಸೆಂಬರ್ 26ರವರೆಗೆ ನ್ಯಾಯಾಂಗ ಬಂಧನ
ಈ ಘಟನೆಗೆ ಸಂಬಂಧಿಸಿದಂತೆ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ