ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ (Arvind Kejriwal) ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನವೇ ದೊಡ್ಡ ಸಂಕಷ್ಟ ಎದುರಾಗಿದೆ. ಮದ್ಯ ನೀತಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗಾಗಿ ಒಳಪಡಿಸಲು ದೆಹಲಿ ರಾಜ್ಯಪಾಲ ವಿ.ಕೆ. ಸಕ್ಸೇನಾ (VK Saxena) ಜಾರಿ ನಿರ್ದೇಶನಾಲಯಕ್ಕೆ (ED) ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರೋಪದ ವಿವರಗಳು:
ಮಧ್ಯದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಆಧಾರದ ಮೇಲೆ ಕೇಜ್ರಿವಾಲ್ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು. ಆದರೆ, ಈ ತನಿಖೆಗೆ ರಾಜ್ಯಪಾಲರ ಅನುಮೋದನೆ ಅಗತ್ಯವಿದ್ದು, ಇಡಿಯು ವಿಚಾರಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಕಾಯುತ್ತಿತ್ತು.
ಚುನಾವಣೆ ಸಂದರ್ಭದ ಹೊತ್ತಿನಲ್ಲಿ ಸಂಕಷ್ಟ:
ಇನ್ನೂ ಎರಡು ತಿಂಗಳಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣಾ ಹೋರಾಟದ ಮಧ್ಯೆ ಈ ಪ್ರಕರಣವು ಮಹತ್ವ ಪಡೆದಿದೆ. ಲೋಕಸಭೆ ಚುನಾವಣೆಯ ಸೋಲಿನ ಬಳಿಕ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿಗೆ (AAP) ಇದು ಮತ್ತೊಂದು ಕಠಿಣ ಸವಾಲಾಗಿ ಪರಿಣಮಿಸಿದೆ.
ರಾಜ್ಯಪಾಲರ ಅನುಮೋದನೆಯ ಹಿನ್ನಲೆ:
ಅಕ್ರಮ ಹಣ ವರ್ಗಾವಣೆಯ ಆರೋಪದಡಿಯಲ್ಲಿ ಯಾವುದೇ ಸರ್ಕಾರಿ ಹುದ್ದೆಧಾರಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ರಾಜ್ಯಪಾಲರ ಅನುಮೋದನೆಯನ್ನು ಕಡ್ಡಾಯಗೊಳಿಸಿತ್ತು. ಈ ಕ್ರಮದ ಹಿನ್ನೆಲೆಯಲ್ಲಿ ಇಡಿಯು ರಾಜ್ಯಪಾಲರ ಅನುಮತಿ ಕೋರಿ ಪತ್ರ ಬರೆದಿತ್ತು.ಇದನ್ನು ಓದಿ – ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ಈ ಬೆಳವಣಿಗೆ ದೆಹಲಿಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ದೆಹಲಿ ವಿಧಾನಸಭಾ ಚುನಾವಣೆಯ ರಾಜಕೀಯ ಬಣ್ಣವನ್ನು ಮತ್ತಷ್ಟು ತೀವ್ರಗೊಳಿಸಲಿದೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು