ಬೆಂಗಳೂರು: ಕುಂಭಮೇಳದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆ ಮೈಸೂರುದಿಂದ ಪ್ರಯಾಗ್ ರಾಜ್‌ವರೆಗೆ ವಿಶೇಷ ಏಕಮುಖ ಎಕ್ಸ್‌ಪ್ರೆಸ್ ರೈಲು (06215) ವ್ಯವಸ್ಥೆ ಮಾಡಿದೆ.
ರೈಲು ಸಂಖ್ಯೆ 06215, ಮೈಸೂರು-ಪ್ರಯಾಗ್ ರಾಜ್ ಒನ್-ವೇ ಕುಂಭ ವಿಶೇಷ ಎಕ್ಸ್‌ಪ್ರೆಸ್ ರೈಲು ಡಿಸೆಂಬರ್ 23, 2024 (ಸೋಮವಾರ) ಬೆಳಿಗ್ಗೆ 12:30ಕ್ಕೆ ಮೈಸೂರಿನಿಂದ ಹೊರಟು, ಬುಧವಾರ ಸಂಜೆ 3:00ಕ್ಕೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ.
ಈ ರೈಲು ಮಾರ್ಗಮಧ್ಯದಲ್ಲಿ ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಿರಜ್, ಪುಣೆ, ಅಹ್ಮದ್ನಗರ, ಮನ್ಮಡ, ಭುಸಾವಲ್, ಜಬಲ್ಪುರ, ಸತ್ನಾ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲ್ಲಲಿದೆ.ಇದನ್ನು ಓದಿ –ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಪ್ರಯಾಣಿಕರು ರೈಲಿನ ಆಯೋಜನೆ ಮತ್ತು ನಿಲುಗಡೆ ವಿವರಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ (www.enquiry.indianrail.gov.in), 139 ನಂಬರಿಗೆ ಕರೆ ಮಾಡುವ ಮೂಲಕ, ಅಥವಾ NTES ಆಪ್ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.
More Stories
ಓದಿನ ಮಹತ್ವ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ