March 12, 2026

Newsnap Kannada

The World at your finger tips!

meeting 1

10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ

Spread the love

ಬೆಂಗಳೂರು : ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು 9,823 ರು ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಮುಖ್ಯಾಂಶಗಳು:

• ರಾಜ್ಯದ ವಿವಿಧ ಕೈಗಾರಿಕಾ ವಲಯಗಳಲ್ಲಿ ಒಟ್ಟು ರೂ. 9,823 ಕೋಟಿ ಮೊತ್ತದ 10 ಪ್ರಸ್ತಾವನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಕೋಚನಹಳ್ಳಿಯ ಎಲೆಕ್ಟ್ರಾನಿಕ್ಸ್‌ ಮ್ಯಾನುಫಾಕ್ಚರಿಂಗ್‌ ಕ್ಲಸ್ಟರ್‌ ನಲ್ಲಿ ಸೆಮಿಕಂಡಕ್ಟರ್‌ ವಲಯದಲ್ಲಿ ರೂ. 3425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
• ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಲಾಭಾಂಶದಲ್ಲಿ ಪಾಲು ನೀಡುವ ಕುರಿತು ಪರಿಶೀಲನೆ ನಡೆಸಬೇಕು. ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ಈ ಕುರಿತು ಅನುಸರಿಸುತ್ತಿರುವ ನಿಯಮಗಳನ್ನು ಪರಿಶೀಲಿಸಲು ಸೂಚನೆ ನೀಡಿದರು.
• ಕೆಐಎಡಿಬಿಯಿಂದ ಕೈಗಾರಿಕೆಗಳನ್ನು ಆರಂಭಿಸಲು ಜಮೀನು ಪಡೆಯುವ ಕಂಪೆನಿಗಳು ನಿಗದಿತ ಅವಧಿಯಲ್ಲಿ ಕೈಗಾರಿಕೆಯನ್ನು ಆರಂಭಿಸದಿದ್ದರೆ ದಂಡ ವಿಧಿಸುವುದು ಸೇರಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಪರಿಶೀಲನೆ ನಡೆಸಬೇಕು.
• ಸರ್ಕಾರದ ನಿಯಮಾವಳಿಗೆ ಅನುಸಾರವಾಗಿ ಕೈಗಾರಿಕೆಗಳು ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.ಇದನ್ನು ಓದಿ –ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )

ಈ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

error: Content is protected !!