ಮೈಸೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭ್ರಷ್ಟಾಚಾರ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಸರ್ಕಾರ ಕ್ರಮ ಕೈಗೊಂಡಿದ್ದು, ಲೋಕಾಯುಕ್ತ ತನಿಖೆ ನಡೆಯುತ್ತಿರುವ ನಡುವೆಯೇ, ಇಲಾಖೆ ಮಟ್ಟದಲ್ಲಿ ಕೂಡ ತನಿಖೆ ಮುಂದುವರಿದಿದೆ.
ಐಎಎಸ್ ಅಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ನೇತೃತ್ವದ ಸಮಿತಿಯು ಈ ಸಂಬಂಧ ತನಿಖೆ ನಡೆಸಿ, ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿತ್ತು.
ಈ ವರದಿಯಲ್ಲಿ 8 ಬೃಹತ್ ಪ್ರಕರಣಗಳಲ್ಲಿ ಬದಲಿ ನಿವೇಶನ ಹಂಚಿಕೆಯಲ್ಲಿ ಉಂಟಾದ ಅವ್ಯವಹಾರವನ್ನು ಸಾಕ್ಷಿಗಳೊಂದಿಗೆ ಸಾಬೀತುಪಡಿಸಲಾಗಿದೆ. ಈ ಅವ್ಯವಹಾರದಿಂದ ಮುಡಾಗೆ ಮತ್ತು ಸರ್ಕಾರಕ್ಕೆ ದೊಡ್ಡ ಪ್ರಮಾಣದ ಆರ್ಥಿಕ ನಷ್ಟ ಉಂಟಾದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ದಿನೇಶ್ ಕುಮಾರ್ ಮುಡಾ ಆಯುಕ್ತರಾಗಿದ್ದ ಕಾಲದಲ್ಲಿ ಈ ಅವ್ಯವಹಾರ ನಡೆದಿದೆ ಎಂಬುದು ವರದಿಯ ಪ್ರಮುಖ ಅಂಶವಾಗಿದೆ.
ಈ ವರದಿ ಆಧರಿಸಿ, ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅವರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್‌ನಲ್ಲಿ,
- ವರದಿಯಲ್ಲಿ ಉಲ್ಲೇಖಿತ ಎಲ್ಲಾ ಹಂತದ ಅಧಿಕಾರಿಗಳ ಮಾಹಿತಿಯನ್ನು ನೀಡಲು,
- ಸರ್ಕಾರಕ್ಕೆ ಉಂಟಾದ ಆರ್ಥಿಕ ನಷ್ಟದ ಅಂದಾಜು ವಿವರ ಸಲ್ಲಿಸಲು,
- ಅವ್ಯವಹಾರದ ಸಂಬಂಧಿತ ಎಲ್ಲಾ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಒದಗಿಸಲು ಆದೇಶಿಸಲಾಗಿದೆ.
ಇದನ್ನು ಓದಿ –ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
ಇದಲ್ಲದೆ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ನೌಕರನನ್ನು ರಕ್ಷಿಸಲು ಪ್ರಯತ್ನಿಸಿದ್ದಲ್ಲಿ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದೆಂದು ಈಗಿನ ಆಯುಕ್ತರಿಗೆ ಎಚ್ಚರಿಕೆ ನೀಡಲಾಗಿದೆ.
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !