December 25, 2024

Newsnap Kannada

The World at your finger tips!

, suicide , mother , crime

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !

Spread the love

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್‌ನ ಕಮ್ಮಸಂದ್ರದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾವು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ದಾರುಣ ಘಟನೆಯಲ್ಲಿ ಮಹಿಳೆ ಮೊದಲು ತನ್ನ ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ಜೀವಹೀನರಾಗಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಬೆಮೆಲ್ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ಅಂಗವಾಗಿ ಮಹಿಳೆಯ ಗಂಡ ಮಣಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನು ಓದಿ –ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ

ಸ್ಥಳೀಯರಲ್ಲಿ ಈ ಘಟನೆ ಆಘಾತ ಮತ್ತು ವಿಷಾದ ಉಂಟುಮಾಡಿದ್ದು, ತನಿಖೆ ಮುಂದುವರಿಯುತ್ತಿದೆ.

Copyright © All rights reserved Newsnap | Newsever by AF themes.
error: Content is protected !!