ಚಾಮರಾಜನಗರ: ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂಬ ಒತ್ತಾಯದೊಂದಿಗೆ ದಲಿತಪರ ಮತ್ತು ಪ್ರಗತಿಪರ ಸಂಘಟನೆಗಳು ಕರೆ ನೀಡಿದ ಚಾಮರಾಜನಗರ ಬಂದ್‌ನಿಂದ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.
ಮಂಗಳವಾರ (ಡಿಸೆಂಬರ್ 31) ದಲಿತಪರ ಮತ್ತು ಪ್ರಗತಿಪರ ಸಂಘಟನೆಗಳು ಕರೆಯಿದ್ದ ಬಂದ್‌ನ ಪರಿಣಾಮವಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳು ಮತ್ತು ಖಾಸಗಿ ಬಸ್‌ಗಳು ಸಂಚಾರ ಮಾಡದೇ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿರ್ಗಮಿಸಲು ಪರದಾಡುವಂತಾಯಿತು.
ಗ್ರಾಮೀಣ ಭಾಗದಿಂದ ನಗರಕ್ಕೆ ಕಾಲೇಜುಗಳಿಗೆ ಬರಬೇಕಾದ ವಿದ್ಯಾರ್ಥಿಗಳು, ಮತ್ತು ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಹೋಗಬೇಕಾದ ವಿದ್ಯಾರ್ಥಿಗಳು ಸಾರಿಗೆ ಸೌಕರ್ಯದ ಕೊರತೆಯಿಂದಾಗಿ ತೀವ್ರ ತೊಂದರೆ ಅನುಭವಿಸಿದರು.ಇದನ್ನು ಓದಿ –ಹೊಸ ವರ್ಷದ ಹೊಸ್ತಿಲಿನಲ್ಲಿ… ನವ ಆಶಯಗಳ ತೇರನೆಳೆಯೋಣ ಬನ್ನಿ
ಕೆಲವರು ಬಸ್‌ಗಾಗಿ ಹೊತ್ತೊತ್ತಿಗೂ ಕಾದು ನಂತರ ಬಸ್‌ಗಳು ಇಲ್ಲದಿದ್ದ ಕಾರಣ ಆಟೋಗಳಲ್ಲಿ ತೆರಳಬೇಕಾಯಿತು. ಈ ಸ್ಥಿತಿಯು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ, ಸಾಮಾನ್ಯ ಪ್ರಯಾಣಿಕರಿಗೂ ದೈನಂದಿನ ಜೀವನದಲ್ಲಿ ತೊಂದರೆ ಉಂಟುಮಾಡಿದೆ.
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ