ಹುಬ್ಬಳ್ಳಿ: ಕಾರವಾರ ಜಿಲ್ಲೆಯ ಮುಂಡಗೋಡು ತಾಲೂಕಿನ ಅಳೂರು ಓಣಿಯಲ್ಲಿ ಮೂರು ವರ್ಷದ ಮಯೂರಿ ಎಂಬ ಬಾಲಕಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮಾರಿಕಾಂಬ ಅಂಗನವಾಡಿಗೆ ತೆರಳಿದ ಮಯೂರಿ ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಆಕೆಯ ಕಾಲಿಗೆ ಹಾವು ಕಚ್ಚಿತು.
ತಕ್ಷಣವೇ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ದಾರುಣವಾಗಿ ಮೃತಪಟ್ಟಿದ್ದಾಳೆ.
ಇದನ್ನು ಓದಿ –ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಸಂಚಾರ: ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಸೂಚನೆ
ಈ ಘಟನೆಯು ಸ್ಥಳೀಯರನ್ನು ಮರುಗಿಸಿದೆ, ಹಾಗೂ ಅಂಗನವಾಡಿ ಮಕ್ಕಳ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಮೂಡಿವೆ.
More Stories
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ